ದಾವಣಗೆರೆ: ಝೀರೋ ಟ್ರಾಫಿಕ್‍ನಿಂದ ಭಾರೀ ಚರ್ಚೆಯಾಗಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮತ್ತೆ ಅದೇ ಕಾರಣಕ್ಕೆ ದಾವಣಗೆರೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಪರಮೇಶ್ವರ್ ಅವರು ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿನಿಂದ ದಾವಣಗೆಯಲ್ಲಿ ನಡೆದ ಜಿಲ್ಲಾ ಛಲವಾದಿ ಮಹಾಸಭಾ ಕಾರ್ಯಕ್ರಮಕ್ಕೆ ಬೆಳಗ್ಗೆ 9 ಗಂಟೆಗೆ ಆಗಮಿಸಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾರ್ಯಕ್ರಮ ಮುಗಿಸಿಕೊಂಡು ರಾಮನಗರಕ್ಕೆ ಹೊರಡುವಾಗಲೂ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು.

ಝೀರೋ ಟ್ರಾಫಿಕ್‍ಗಾಗಿ ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮಧ್ಯೆ 100ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇದರಿಂದಾಗಿ ಬೆಳಗ್ಗೆ ಅರ್ಧಗಂಟೆಗೂ ಅಧಿಕ ಕಾಲ ಸಂಚಾರ ಸ್ಥಗಿತಗೊಂಡಿದ್ದರಿಂದ ದಾವಣಗೆರೆ ಸಮೀಪದ ಹೆಬ್ಬಾಳ ಟೋಲ್ ಮುಂಭಾಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಸ್ಥಗಿತಗೊಂಡಿದ್ದರಿಂದ ಕಾದು, ಕಾದು ಬೇಸತ್ತ ಜನರು ಡಿಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply